ಕನ್ಯಾನ ಹಝ್ರತ್ ಶಾಹುಲ್ ಹಮೀದ್ ವಲಿಯುಲ್ಲಾ ದರ್ಗಾಕ್ಕೆ ಟಿ.ಎಂ. ಶಾಹಿದ್ ತೆಕ್ಕಿಲ್ ಭೇಟಿ: ಸನ್ಮಾನ

ಕನ್ಯಾನ: ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ (ಸಚಿವ ಸ್ಥಾನಮಾನ) ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ಕನ್ಯಾನದ ಸುಪ್ರಸಿದ್ಧ ಹಝ್ರತ್ ಶಾಹುಲ್ ಹಮೀದ್ ವಲಿಯುಲ್ಲಾ ದರ್ಗಾ ಶರೀಫ್‌ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದರ್ಗಾ ಸಮಿತಿ ಹಾಗೂ ಸ್ಥಳೀಯ ಗಣ್ಯರ ವತಿಯಿಂದ ಟಿ.ಎಂ. ಶಾಹಿದ್ ತೆಕ್ಕಿಲ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಯೂತ್ ಐಕಾನ್ ನುಮಾನ್ ಇಸ್ಮಾಯಿಲ್, ವಲಯ ಅಧ್ಯಕ್ಷರಾದ ಮಜೀದ್ ಕನ್ಯಾನ, ಮಸೀದಿ ಕಾರ್ಯದರ್ಶಿ ಸಿದ್ದೀಕ್, ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್, ಪಂಚಾಯತ್ ಸದಸ್ಯ ಮೊಯ್ದು ಕುಂಞಿ, ಮಂಡಿಯೂರು ಸದಸ್ಯ ಮೊಯ್ದು ಕುಂಞಿ, ಸದಸ್ಯರಾದ ಉಮ್ಮರ್, ಫಝಲ್, ಕನ್ಯಾನ ಉಸ್ತಾದ್ ಹಾಗೂ ಇತರ ಯುವ ಸದಸ್ಯರು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *