ಬಂಟ್ವಾಳ: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರು ಬಂಟ್ವಾಳದಲ್ಲಿರುವ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ‘ಚೆನ್ನಮ್ಮ ಕುಟೀರ’ ನಿವಾಸಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರ ಆಶೀರ್ವಾದ ಪಡೆದ ಸಭಾಪತಿ ಸಲೀಂ ಅಹ್ಮದ್ ಅವರನ್ನು ಪೂಜಾರಿಯವರು ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಿದರು. ಜೊತೆಗೆ ಸಭಾಪತಿಯವರಿಗೆ ಶುಭ ಹಾರೈಸಿ ಆಶೀರ್ವದಿಸಿದರು.
ಮಾಜಿ ಕೇಂದ್ರ ಸಚಿವರ ನಿವಾಸದಲ್ಲಿ ನಡೆದ ಈ ಭೇಟಿಯು ಗೌರವ ಹಾಗೂ ಸೌಹಾರ್ದದ ಕ್ಷಣಕ್ಕೆ ಸಾಕ್ಷಿಯಾಯಿತು.

Leave a Reply