
ಶಿಗ್ಗಾಂವಿ: ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ (ಸಚಿವ ಸ್ಥಾನಮಾನ) ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಾಹಿದ್ ತೆಕ್ಕಿಲ್ ಅವರನ್ನು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ಅಧ್ಯಕ್ಷ ಸೈಯದ್ ಅಜೀಂಪೀರ್ ಎಸ್. ಖಾದ್ರಿ ಭೇಟಿಯಾದರು.

ಶಿಗ್ಗಾಂವಿಯ ವಿವಿಐಪಿ (VVIP) ಅತಿಥಿ ಗೃಹದಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ, ನಾಯಕರು ಪ್ರಸ್ತುತ ರಾಜಕೀಯ ವಿದ್ಯಮಾನಗಳು, ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಪರಸ್ಪರ ಸಮಾಲೋಚನೆ ನಡೆಸಿದರು. ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply